ಉಡುಪಿ ಅ 26: ಸಂಪ್ರದಾಯದಂತೆ ವಿಜಯದಶಮಿ ದಿನವಾದ ಇಂದು ಶ್ರೀಕೃಷ್ಣ ಮಠದಲ್ಲಿ ಕದಿರು ಕಟ್ಟುವ ಹಬ್ಬ ನಡೆಯಿತು. ಶ್ರೀಸೋದೆ ಮಠದಲ್ಲಿ ಕದಿರನ್ನು ಪೂಜಿಸಿ ಮೆರವಣಿಗೆಯಲ್ಲಿ ಶ್ರೀಕೃಷ್ಣನ ಗರ್ಭಗುಡಿಯ ಪೂರ್ವದ್ವಾರದಲ್ಲಿ ಒಳತಂದು ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಪರ್ಯಾಯ ಮಠದ ಪಾರುಪತ್ಯಗಾರರಾದ ಲಕ್ಷ್ಮೀಶ ಆಚಾರ್ಯರ ನೇತೃತ್ವದಲ್ಲಿ ಪೂಜೆ ನೆರವೇರಿತು. ಬಡಗುಮಾಳಿಗೆಯಲ್ಲಿ ಪೂಜೆಯ ನಂತರ ಅಲ್ಲಿ ನೆರೆದಿದ್ದ ಭಕ್ತರಿಗೆ ಕದಿರನ್ನು ವಿತರಿಸಲಾಯಿತು.Read More
ಮಂಗಳೂರು ಅ 25: ಮಹಾನಗರಪಾಲಿಕೆಯಿಂದ ನೀಡಲಾದ ನೀರಿನ ಬಿಲ್ಲಿನಲ್ಲಿ ಹೆಚ್ಚುವರಿ ಬಂದಿರುವ ಬಗ್ಗೆ ಅಥವಾಇತರಯಾವುದೇ ತಕರಾರುಗಳು ಇದ್ದಲ್ಲಿ ನವೆಂಬರ್ 5 ರೊಳಗೆ ಮಹಾನಗರಪಾಲಿಕೆಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಗಳನ್ನು ಮಹಾನಗರಪಾಲಿಕೆಯ ನೀರಿನ ಅದಾಲತ್ ಸಭೆಗಳಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಮಹಾನಗರಪಾಲಿಕೆಯ ಮಹಾಪೌರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ಅ 25: ಅಕ್ಟೋಬರ್ 26 ರಂದು ಸಾರ್ವತ್ರಿಕ ರಜೆ ಇರುವುದರಿಂದ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಲೇಕ್ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಬೆಳ್ತಂಗಡಿ ಅ 24: ಕೃಷಿಕರಿಗೆ ಪ್ರೋತ್ಸಾಹ ನೀಡಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಯಂತ್ರಗಳನ್ನು ಖರೀದಿಸಿ ಎಂಟು ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶನಿವಾರ ತಮ್ಮ 53 ನೆ ವರ್ಷದ ಪಟ್ಟಾಭಿಷೇಕ ವರ್ಧಂತಿಯ ಸರಳ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕ ರಾಜ್ಯದ 25 ಜಿಲ್ಲೆಗಳ […]Read More
ಮಂಗಳೂರು ಅ 23: ಏಳು ಜನರ ಜಿಲ್ಲಾ ಮರಳು ಸಮಿತಿಯು ಪ್ರಸ್ತುತ ಮರಳು ದಿಬ್ಬಗಳನ್ನು ತೆರವುಗೊಳಿಸಲು ಷರತ್ತು ಬದ್ಧ ತಾತ್ಕಾಲಿಕ ಪರವಾನಿಗೆ ನೀಡಲು ನಿರ್ಣಯಿಸಿದೆ. ಮರಳು ದಿಬ್ಬ ತೆರವುಗೊಳಿಸಲು ತಾತ್ಕಾಲಿಕ ಪರವಾನಿಗಾಗಿ ಸ್ವೀಕೃತಗೊಂಡ 318 ಅರ್ಜಿಗಳಲ್ಲಿ ಕಳೆದ ಸಾಲಿನಲ್ಲಿ ತಾತ್ಕಾಲಿಕವಾಗಿ ಪರವಾನಿಗೆ ಹೊಂದಿದೆ. 105 ಅರ್ಜಿಗಳನ್ನು ಮೊದಲ ಹಂತದಲ್ಲಿ ಪರಿಶೀಲನಾ ಸಮಿತಿ ಪರಿಶೀಲನೆ ನಡೆಸಿ ಶಿಫಾರಸ್ಸಿನಂತೆ ಜಿಲ್ಲಾ 7 ಸದಸ್ಯರ ಸಮಿತಿಯು ಚರ್ಚಿಸಿ ಪೂರಕ ದಾಖಲೆಗಳು ಸರಿ ಇರುವ 79 ಅರ್ಜಿದಾರರಿಗೆ ಮರಳು ದಿಬ್ಬಗಳನ್ನು ತೆರವುಗೊಳಿಸಲು ಷರತ್ತುಬದ್ಧ […]Read More
ಮಂಗಳೂರು ಅ 23 : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊರರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಅನೇಕ ಆಕ್ಷೇಪಿತ ದೂರುಗಳು ಬಂದಿರುವುದರಿಂದ ಇನ್ನು ಮುಂದಕ್ಕೆ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಬೀಫ್ ಸ್ಟಾಲ್ನಲ್ಲಿ ಬೇರೆ ರಾಜ್ಯ, ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಸಂಬಂಧಿತ ಮಾಲಕರು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ಮಹಾನಗರಪಾಲಿಕೆಯ ಮಹಾಪೌರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಅನಧಿಕೃತವಾಗಿ ಮಾರಾಟ ಮಾಡಿರುವುದು ಕಂಡುಬಂದಲ್ಲಿ ಸ್ಟಾಲಿನ ಪರವಾನಿಗೆಯನ್ನು ರದ್ದುಪಡಿಸಲಾಗುತ್ತದೆ. ಹಾಗೂ ಪಾಲಿಕೆ […]Read More
ಕಾರವಾರ, ಅ 22 ಹೊಸ ಮರಳು ನೀತಿ-2020ರ ಅನ್ವಯ ಜಿಲ್ಲೆಯ ಹಳ್ಳ, ಕೊಳ್ಳ, ನದಿ ಹಾಗೂ ಅಣೆಕಟ್ಟಿನ ಹಿನ್ನಿರಿನಲ್ಲಿ ಲಭ್ಯವಿರುವ ಮರಳು ನಿಕ್ಷೇಪವನ್ನು ಗುರುತಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿ, ತಹಶೀಲ್ದಾರ ಹಾಗೂ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. “ಈ ಹೊಸ ಮರಳು ನೀತಿ ಬಡವರಿಗೆ ಮತ್ತು ಸ್ಥಳೀಯರಿಗೆ ದೊರೆಯಬೇಕೆಂಬ ಉದ್ದೇಶದಿಂದ ಮಾಡಲಾಗಿರುವುದರಿಂದ ಹಳ್ಳ, […]Read More
ಶ್ವೇತಾ ಎಸ್ ಧರ್ಮಸ್ಥಳ, ಅ 22: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರ 53ನೆ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಅಕ್ಟೊಬರ್ 24 ರಂದು ಸರಳವಾಗಿ ನಡೆಯಲಿದೆ. ನವೆಂಬರ್ 25, 1948 ರಂದು ರತ್ನವರ್ಮ ಹೆಗ್ಗಡೆ- ರತ್ನಮ್ಮ ಹೆಗ್ಗಡೆ ಅವರ ಮೊದಲನೇ ಮಗನಾಗಿ ಜನಿಸಿದ ವೀರೇಂದ್ರ ಕುಮಾರ್ ತನ್ನ ಇಪ್ಪತ್ತನೆ ವರ್ಷದಲ್ಲಿ ಧರ್ಮಸ್ಥಳದ ಇಪ್ಪತ್ತೊಂದನೆ ಧರ್ಮಾಧಿಕಾರಿ ಯಾಗಿ- ವೀರೇಂದ್ರ ಹೆಗ್ಗಡೆ ಯಾಗಿ- ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. ಎಳೆಯ ವಯಸ್ಸಿನಲ್ಲೇ ಜನರ ಸೇವೆ ಬಗ್ಗೆ ಅತ್ಯಂತ […]Read More
ಮಂಗಳೂರು ಅ 21: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನ ದೀಪಾವಳಿ ಹಬ್ಬವನ್ನು ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಸೂಕ್ತ ಮುಂಜಾಗೃತ ಕ್ರಮಗಳನ್ನು ಅನುಸರಿಸಿ ಆಚರಿಸಬೇಕಾಗಿರುತ್ತದೆ. ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಅಧಿಕಾರದಂತೆ ದ.ಕ. ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ […]Read More
ಉಡುಪಿ, ಅ 20: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅಕ್ಟೋಬರ್ 25 ರ ವರೆಗೆ ನವರಾತ್ರಿ ಉತ್ಸವ ಜರುಗಲಿದ್ದು, ಸಾರ್ವಜನಿಕರ ಮತ್ತು ಕರ್ತವ್ಯ ನಿರತ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ದೇವಾಲಯದಲ್ಲಿ ಅನುಷ್ಟಾನಗೊಳಿಸುವ ಸಲುವಾಗಿ ಅಕ್ಟೋಬರ್ 24 ರ ಮಹಾನವಮಿಯಂದು ನಡೆಯಲಿರುವ ರಥೋತ್ಸವವನ್ನು ದೇವಸ್ಥಾನದ ಆವರಣದ ಒಳಗೆ ದೇವಸ್ಥಾನದ ಅರ್ಚಕರು, ಪುರೋಹಿತರು, ಸಿಬ್ಬಂದಿಗಳು ಮಾತ್ರ ನೆರವೇರಿಸಲಿದ್ದಾರೆ. ಅಕ್ಟೋಬರ್ 25 ರ ವಿಜಯದಶಮಿ ದಿನದಂದು ಬೆಳಗ್ಗೆ 4 ಗಂಟೆಯಿಂದ ವಿದ್ಯಾರಂಭ ಪ್ರಾರಂಭವಾಗಲಿದ್ದು, […]Read More
