ಧರ್ಮಸ್ಥಳ, ಅ 03: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ‘ಪ್ರಾರ್ಥನಾ ಸಮಾವೇಶ’ ವು ಇಂದು ನಡೆಯಿತು. ಶ್ರೀ ಕ್ಷೇತ್ರದಲ್ಲಿ 22 ನೇ ವರ್ಷದ ಭಜನಾ ತರಬೇತಿ ಕಮ್ಮಟದ ಬದಲಾಗಿ ಸಾಂಕೇತಿಕವಾಗಿ ಈ ಬಾರಿ ‘ಪ್ರಾರ್ಥನಾ ಸಮಾವೇಶ’ ವು ನಡೆಯಿತು. “ಹೆಚ್ಚು ಜನ ಸೇರಿದರೆ ಅಪಾಯವೆಂದು ಅರಿತು ಸಾಂಕೇತಿಕವಾಗಿ ಈ ವರ್ಷ ‘ಪ್ರಾರ್ಥನಾ ಸಮಾವೇಶ’ವನ್ನು ನಡೆಸಿದ್ದೇವೆ. ಮುಂದಿನ ವರ್ಷದಿಂದ ಲಕ್ಷಾಂತರ ಜನರಿಗೆ ಭಜನಾ ಕಮ್ಮಟದ ತರಬೇತಿಯನ್ನು ವೀಕ್ಷಿಸಲು ಆನ್ಲೈನ್ ಮೂಲಕ ವ್ಯವಸ್ಥೆ ಮಾಡುವ ಬಗ್ಗೆ […]Read More
ಮಂಗಳೂರು ಅ: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದ ಜಾಕ್ವೆಲ್ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್ವೆಲ್ ಶುಚಿಗೊಳಿಸುವ ಕೆಲಸ ನಡೆಯಲಿದೆ. ಈ ಕಾರಣದಿಂದ ಅಕ್ಟೋಬರ್ 5 ರಂದು ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 6 ಬೆಳಗ್ಗೆ 6 ಗಂಟೆಯವರೆಗೆ 24 ಗಂಟೆ ಅವಧಿಯಲ್ಲಿ ಪಡೀಲ್, ಮಂಗಳಾದೇವಿ, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಉಲ್ಲಾಸ್ನಗರ, ಮುಳಿಹಿತ್ಲು, ಕಾರ್ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ಬ್ಯಾಂಕ್ ಇತ್ಯಾದಿ […]Read More
ಬಿಬಿಎಂಪಿ ವ್ಯಾಪ್ತಿಯಲ್ಲಿ 11 ಚಿತಾಗಾರಗಳಿದ್ದು, ಇಂದು ಲೋರ್ಕಾಪಣೆಗೊಳಿಸಿರುವುದು ಸೇರಿ 12 ಚಿತಾಗಾರಗಳಾಗಲಿವೆ. ನಗರದಲ್ಲಿ ಪ್ರತಿನಿತ್ಯ ಕೋವಿಡ್ ಹಾಗೂ ನಾನ್-ಕೋವಿಡ್ ಸೇರಿ 165 ಮೃತ ದೇಹಳ ಶವ ಸಂಸ್ಕಾರ ಮಾಡಬಹುದು. 12 ಚಿತಾಗಾರಗಳಲ್ಲಿ ಪಣತ್ತೂರು, ಕೂಡ್ಲು, ಕೆಂಗೇರಿ, ಮೇಡಿ ಅಗ್ರಹಾರ(ಯಲಹಂಕ)ದಲ್ಲಿರುವ 4 ಚಿತಾಗಾರಗಳಲ್ಲಿ ಕೋವಿಡ್ ಹಾಗೂ ಇನ್ನುಳಿದ 8 ಚಿತಾಗಾರಗಳಲ್ಲಿ ನಾನ್-ಕೋವಿಡ್ ಶವ ಸಂಸ್ಕಾರ ಮಾಡಲಾಗುತ್ತಿದೆ ಬೆಂಗಳೂರು, ಅ 03: ಬಿಬಿಎಂಪಿ ಪಶ್ಚಿಮ ವಲಯ ಜಗಜೀವನರಾಮ ನಗರ ವಾರ್ಡ್-136ರಲ್ಲಿ ನೂತನವಾಗಿ ನವೀಕೃತಗೊಳಿಸಿರುವ ವಿದ್ಯುತ್ ಚಿತಾಗಾರವನ್ನು ಶಾಸಕ ಬಿ.ಝಡ್.ಜಮೀರ್ ಅಹಮದ್ […]Read More
ಮಂಗಳೂರು ಅ03 :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ www.scholarships.gov.in ನಲ್ಲಿ ಹಾಗೂ ಹೊಸ ಮತ್ತು ನವೀಕೃತ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ www.gokdom.kar.nic.in ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರೋಡ್, […]Read More
ಮಂಗಳೂರು ಅ 03 :- ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮೂಲನಿವಾಸಿ ಪಂಗಡದವರಾದ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹ ಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು. ಅರ್ಜಿಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, (ಗ್ರೇಡ್-1&2) ಸಮಾಜ ಕಲ್ಯಾಣ ಇಲಾಖೆಯಲ್ಲಿ ಪಡೆದು ನವೆಂಬರ್ 30 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:0824-2451269,2450114 ಸಂಪರ್ಕಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ […]Read More
ಉಡುಪಿ , ಅ 02: ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿದ ಸ್ವಾತಂತ್ರ್ಯ ಪೂರ್ವದ ರೇಡಿಯೋ ಟವರ್ ಗೆ ಮರುಜೀವ ಬಂದಿದೆ. 1938 ರಲ್ಲಿ ನಿರ್ಮಾಣಗೊಂಡಿರುವ ಈ ಟವರ್ ಕೆಲವು ವರ್ಷಗಳಿಂದ ಕಾರ್ಯನಿರ್ವಹಣೆ ಸ್ಥಗಿತಗೊಳಿಸಿದ್ದು, ಕಳೆದ ಬಾರಿಯ ಗಾಂಧೀ ಜಯಂತಿ ಕಾರ್ಯಕ್ರಮದಂದು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಇದನ್ನು ದುರಸ್ತಿಗೊಳಿಸಿ, ಸಾರ್ವಜನಿಕ ಬಳಕೆಗೆ ಅನುವು ಮಾಡಲು ಸೂಚಿಸಿದ್ದರು. ಇಂದು ಗಾಂಧೀ ಜಯಂತಿಯಂದು ಇದರ ಪ್ರಸಾರ ಕಾರ್ಯಕ್ಕೆ ಶಾಸಕ ರಘುಪತಿಭಟ್ ಚಾಲನೆ ನೀಡಿದರು. ಪ್ರಸ್ತುತ ದುರಸ್ತಿಗೊಂಡಿರುವ ಈ ಟವರ್ ಮೂಲಕ […]Read More
ಉಡುಪಿ ಅ 02: ಗಾಂಧೀ ಜಯಂತಿ ಪ್ರಯುಕ್ತ, ಕರಾವಳಿ ಕಾವಲು ಪೊಲೀಸ್ , ಮಲ್ಪೆ ಅವರವತಿಯಿಂದ , ಕಡಲ್ ಸೆಂಟರ್ ಫಾರ್ ಸಪ್ ಸರ್ಫ್ ಯೋಗ ಮತ್ತು ನೇಶನ್ ನೆಸ್ಟ್ ತಂಡದ ಸಹಯೋಗದಲ್ಲಿ , ಮಲ್ಪೆ ಲೈಟ್ಹೌಸ್ ದ್ವೀಪದಲ್ಲಿ ಮತ್ತು ಸಮುದ್ರ ತೀರ ಪ್ರದೇಶದಲ್ಲಿ ಸ್ಚಚ್ಛತಾ ಕಾರ್ಯಕ್ರಮವು, ಕರಾವಳಿ ಕಾವಲು ಪಡೆಯ ಎಸ್ಪಿ ಆರ್.ಚೇತನ್ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ಸಂಗ್ರಹಿಸಿದ ಕಸವನ್ನು ಮಣಿಪಾಲದ ಕಸ ವಿಲೇವಾರಿ ಘಟಕಕ್ಕೆ ಸಾಗಿಸಲಾಯಿತು.Read More
ಮಂಗಳೂರು ಅ 01: ಮಂಗಳೂರು ಮಹಾನಗರ ಪಾಲಿಕೆ ಬೆಂಗ್ರೆ ವಾರ್ಡಿನ ಸಾರ್ವಜನಿಕ ರಿಗೆ ಅನುಕೂಲ ಆಗುವಂತೆ ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾದ ಮಾಹಿತಿ ಮತ್ತು ಸೇವಾ ಕೇಂದ್ರ ಹಾಗೂ ಕಾರ್ಪೊರೇಟ್ ಕಛೇರಿಯನ್ನು ಪಕ್ಷದ ರಾಜ್ಯ ಅಧ್ಯಕ್ಷರಾದ ಇಲ್ಯಾಸ್ ಮುಹಮ್ಮದ್ ತುಂಬೆ ಉದ್ಘಾಟಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಸುಹೈಲ್ ಖಾನ್ ವಹಿಸಿದ್ದರು.. ಬೆಂಗರೆ ಮುಯ್ಯುದ್ದೀನ್ ಜುಮ್ಮಾ ಮಸೀದಿ ಇದರ ಖತೀಬರಾದ ಶರೀಫ್ ದಾರಿಮಿ ದುವಾ ಆಶಿರ್ವಚನ ನೀಡಿದರು. ಈ ಸಂಧರ್ಭದಲ್ಲಿ […]Read More
ಉಜಿರೆ, ಅ.1: ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಭಾಸ್ಕರ ಹೆಗಡೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ನೀಡಿದೆ. ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಜಿ.ಪಿ.ಶಿವರಾಂ ಅವರ ಮಾರ್ಗದರ್ಶನದಲ್ಲಿ ‘ಪತ್ರಿಕೆಗಳ ಮೂಲಕ ಔಪಚಾರಿಕ ಶಿಕ್ಷಣ: ಕನ್ನಡ ಪ್ರಮುಖ ದೈನಿಕಗಳ ತೌಲನಿಕ ಅಧ್ಯಯನ’ ಶೀರ್ಷಿಕೆಯಲ್ಲಿ ಪಿ.ಎಚ್.ಡಿ ಮಹಾಪ್ರಬಂಧವನ್ನು ಸಲ್ಲಿಸಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಳಕೋಡು ಗ್ರಾಮದವರಾದ ಭಾಸ್ಕರ ಹೆಗಡೆ ಅವರು […]Read More