ಜೂ.4ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಉಡುಪಿಯಿಂದ ಹೊರಟು ಮಧ್ಯಾಹ್ನ 12.30ಕ್ಕೆ ಮಂಗಳೂರಿನ ಸಕ್ರ್ಯೂಟ್ ಹೌಸ್ಗೆ ಆಗಮಿಸಿ ವಾಸ್ತವ್ಯ ಮಾಡುವರು.Read More
ಮಂಗಳೂರು,ಜೂ.03, 2022: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬಸ್ಸುಗಳಲ್ಲಿ ನಾಮಫಲಕ ಹಾಗೂ ಮಾರ್ಗ ಸೂಚಿಗಳನ್ನು ಕನ್ನಡದಲ್ಲೇ ನಮೂದಿಸುವಂತೆ ಏಪ್ರಿಲ್ ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅದರಂತೆ ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಮತ್ತು ಮಾರ್ಗಸೂಚಿಗಳನ್ನು ಕನ್ನಡದಲ್ಲಿಯೇ ಬರೆಯುವಂತೆ ದಕ್ಷಿಣ ಕನ್ನಡ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಶಿರಸಿ ವಿಭಾಗದಲ್ಲಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ ಪಿಂಚಣಿದಾರರ ಕುಂದು ಕೊರತೆಗಳನ್ನು ಅದಾಲತ್ನಲ್ಲಿ ಚರ್ಚಿಸಲಾಗುವುದು. ಗ್ರಾಮೀಣ ಅಂಚೆ ಸೇವಕರಿಗಾಗಲಿ ಅಥವಾ ಅಂಚೆ ಇಲಾಖೆಯ ಮೂಲಕ ಪಿಂಚಣಿ, ಪಡೆಯುತ್ತಿರುವ ಇತರೆ ನೌಕರರಿಗೆ ಅವಕಾಶವಿರುವುದಿಲ್ಲ. ಪಾಲ್ಗೊಳ್ಳುವ ಅಂಚೆ ಪಿಂಚಣಿದಾರರಿಗೆ ಯಾವುದೇ ಭತ್ಯೆ ಕೊಡಲಾಗುವುದಿಲ್ಲ.Read More
ಕು.ಗೋ.. ಭೂಮಿಗೆ ಲ್ಯಾಂಡ್ ಆದದ್ದು 1938ರ ಇದೇ ತಿಂಗಳು ಜೂನ್ ಆರರಂದು. ಪದ್ಮನಾಭ ಭಟ್ಟ ಹಾಗೂ ವಾಗ್ದೇವೀ ದಂಪತಿಗಳ ಕರುಳ ಬಳ್ಳಿಯಲ್ಲಿ ಜನಿಸಿದ ಏಕಾದಶ ಮಕ್ಕಳಲ್ಲಿ ಪಂಚಮರು ಇವರು. Read More
ಯುವ ಜನಾಂಗ ಮಾದಕ ವಸ್ತುವಿಗೆ ಬಲಿಯಾಗುತ್ತಿದೆ. ಸರಕಾರ ಇದರ ಬಗ್ಗೆ ಗಮನ ಹರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ತಿಳಿಸಿದರು.Read More
ಅವರು ಇಂದು ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕೇಂದ್ರ ಸರ್ಕಾರ ಜಾರಿಗೊಳಿಸಿದ ಜನಪ್ರಿಯ ಯೋಜನೆಗಳ ಫಲಾನುಭವಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More
ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಎರ್ಪಡಿಸಲಾಗಿದ್ದ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ತಡೆಗೆ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಮತನಾಡಿದ ಅವರು, ಮಳೆಗಾಲದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿನ ತಗ್ಗು ಪ್ರದೇಶಗಳು ಹಾಗೂ ಗುಂಡಿಗಳಲ್ಲಿ ನೀರು ನಿಲ್ಲುವುದರಿಂದ ಸೋಳ್ಳೆಗಳು ಉತ್ಪತ್ತಿಯಾಗುವುದರಿಂದ ಡೆಂಗ್ಯೂ, ಮಲೆರಿಯಾ ಅನೇಕ ಖಾಯಿಲೆಗಳು ಹರಡುವ ಸಾದ್ಯತೆ ಇರುವುದರಿಂದ ಗುಂಡಿಗಳಲ್ಲಿ ನೀರು ನಿಲ್ಲದಂತೆ ವ್ಯವಸ್ಥೆ ಮಾಡಬೇಕು ಅಧಿಕಾರಿಗಳಿಗೆ ಸೂಚಿಸಿದರು.Read More
ಮೇ.31 ಸಂಜೆ 5.25ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 6.30ಕ್ಕೆ ಬಜ್ಪೆಯಿಂದ ರಸ್ತೆ ಮೂಲಕ ಉಡುಪಿ ಜಿಲ್ಲೆಯ ಮಣಿಪಾಲ್ಗೆ ತೆರಳಿ ವಾಸ್ತವ್ಯ ಮಾಡುವರು.Read More
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಉದ್ಘಾಟಿಸುವರು. ಮೂಡಬಿದ್ರೆ ವಿಧಾನಸಭಾ ಶಾಸಕ ಉಮಾನಾಥ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸುವರು.Read More