ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ಸಾಂಸ್ಕೃತಿಕ ಸಂಘ ಸಂಸ್ಥೆಗಳ ವಾರ್ಷಿಕ ಚಟುವಟಿಕೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿಸಲು, ಶಿಲ್ಪ ಹಾಗೂ ಚಿತ್ರಕಲೆ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read More
ವಿಶೇಷ ಘಟಕ ಯೋಜನೆಯಡಿ ಪ.ಜಾತಿ ಹಾಗೂ ಪಂಗಡದವರ ಸಮಗ್ರ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಸಂಪೂರ್ಣ ಬಳಕೆ ಮಾಡಿಕೊಳ್ಳುವುದರ ಜೊತೆಗೆ 100 ಪ್ರತಿಶತ ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.Read More
ಶ್ರೀಕೃಷ್ಣಾಪುರ ಮಠದ ಪರ್ಯಾಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಥಬೀದಿಯ ಪೂರ್ಣಪ್ರಜ್ಞ ಮಂಟಪದಲ್ಲಿ,ಶರತ್ ಹಳೆಯಂಗಡಿ ಮತ್ತು ಬಳಗದವರಿಂದ ವಾದ್ಯ ಸಂಗೀತ ನಡೆಯಿತು.Read More
ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರಗಳು ಮತ್ತೊಮ್ಮೆ ಅನಗತ್ಯವಾಗಿ ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಹೇರಿಕೆಯ ಮೂಲಕ ಮುಂದುವರಿದ ಭಾಗವಾಗಿ ಲಾಕ್ ಡೌನ್ ಹೇರುವ ತಯಾರಿಯಲ್ಲಿದೆ. ಇದು ದಲಿತ ಮತ್ತು ಆದಿವಾಸಿ ವಿರೋಧಿ ಧೊರಣೆ ಎಂದು ಸಿ.ಐ.ಟಿ.ಯು. ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.Read More
ಕನ್ನಡ ನಾಡು ನುಡಿಯ ಧೀಮಂತ ಲೇಖಕ, ಖ್ಯಾತ ವಿಮರ್ಶಕ ಕ.ಸಾ.ಪ.ದ ಮಾಜಿ ರಾಜ್ಯಾಧ್ಯಕ್ಷ ಪ್ರೋ. ಚಂದ್ರಶೇಖರ ಪಾಟೀಲರಿಗೆ ಕಾರವಾರ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನುಡಿ ನಮನ ಅರ್ಪಿಸಲಾಯಿತು.Read More
ಜಿಲ್ಲೆಯಲ್ಲಿ 2021-22ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಸ್ಥಳೀಯ ಭತ್ತದ ತಳಿಗಳಾದ ಎಮ್.ಓ 4, ಸಹಿತ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮಾ ತಳಿಗಳನ್ನು ಖರೀದಿಸಲು ಸರ್ಕಾರದಿಂದ ಅನುಮತಿ ನೀಡಿದೆ.Read More
ಫೆಬ್ರವರಿ ಹಾಗೂ ಮಾರ್ಚ್ ನಲ್ಲಿ ಅಧಿಕಾರಾವಧಿ ಮುಕ್ತಾಯವಾಗಲಿರುವ ಮಂಗಳೂರು, ಬಂಟ್ವಾಳ ಹಾಗೂ ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಕರಡು ಮತದಾರರ ಪಟ್ಟಿಯ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಿಸಿದ್ದಾರೆ.Read More
ಉಡುಪಿ, ಜ 8, 2022: ಕೋವಿಡ್ 19 ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಾದ ಪೊಲೀಸ್, ಕಂದಾಯ, ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಮತ್ತಿತರ ಸಿಬ್ಬಂದಿಗಳನ್ನು ಕೋವಿಡ್ 3 ನೇ ಅಲೆ ಬಾಧಿಸದಂತೆ ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರಿಗೆ ಮುನ್ನೆಚ್ಚರಿಕೆಯಾಗಿ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡಲು ಸರ್ಕಾರ ನಿರ್ಧರಿಸಿದೆ. ಉಡುಪಿ ಜಿಲ್ಲೆಯಲ್ಲಿ ಜನವರಿ 10 ರಿಂದ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 60ವರ್ಷ ಮೇಲ್ಪಟ್ಟ ಅಸ್ವಸ್ಥತೆ […]Read More
ಉಡುಪಿ, ಜ 06, 2022: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ದ್ವಿತೀಯ ಆರಾಧನೆ ಪ್ರಯುಕ್ತ ಉಡುಪಿ ಪೇಜಾವರ ಮಠದಲ್ಲಿ, ಶ್ರೀ ಹಂಡೆ ದಾಸ ಪ್ರತಿಷ್ಠಾನ ರಿ.ಕಾರ್ಕಳ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನೆ ಕಾರ್ಯಕ್ರಮ ಆಯೋಜಿಸಿತ್ತು. ಶ್ರೀ ಹಂಡೆ ದಾಸ ಪ್ರತಿಷ್ಠಾನದ ಸದಸ್ಯರು, ರಾಜರಾಜೇಶ್ವರ ಭಜನಾ ಮಂಡಳಿಯ ಮಹಿಳೆಯರು ಮತ್ತು ಮಕ್ಕಳು, ಕೂಟ ಮಹಾ ಜಗತ್ತು ಉಡುಪಿ, ಗಿರಿ ಬಳಗ, ಕುಂಜಾರುಗಿರಿ, ಶ್ರೀವೆಂಕಟರಮಣ ಸ್ತೋತ್ರ ಭಜನಾ ಮಂಡಳಿ, ಕರಂಬಳ್ಳಿ ಇದರ ಸದಸ್ಯರು ಪಾಲ್ಗೊಂಡಿದ್ದರು. ಶ್ರೀಮಠದಲ್ಲಿ ವಿಶೇಷ ಪೂಜೆ […]Read More
ಕೋವಿಡ್ ಮಾರ್ಗಸೂಚಿಗಳನ್ನು ಗ್ರಾಹಕರು ಪಾಲಿಸುವಂತೆ ಅಂಗಡಿ ಮುಂಗಟ್ಟುಗಳ ಮುಖ್ಯಸ್ಥರು ಎಚ್ಚರಿಸುವುದರೊಂದಿಗೆ ವ್ಯವಹರಿಸಬೇಕು ತಪ್ಪಿದಲ್ಲಿ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ , ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆಯನ್ನು ನೀಡಿದರು.Read More