Tags : Applications

Dakshina Kannada

ಅರೆಕಾಲಿಕ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಐ.ಟಿ.ಐ ಉತ್ತೀರ್ಣರಾಗಿರುವವರು ಅಥವಾ ವಿಜ್ಞಾನ/ತಾಂತ್ರಿಕ ವಿಷಯದಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ಮಂಗಳೂರು ಮಹಾನಗರ ಪಾಲಿಕೆ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕು, ಬಂಟ್ವಾಳ ತಾಲ್ಲೂಕು ಹಾಗೂ ಉಡುಪಿ ಜಿಲ್ಲೆಯ ಉಡುಪಿ ತಾಲ್ಲೂಕುಗಳಲ್ಲಿನ ಯಾವುದೇ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಾರ್ಖಾನೆ, ಕೈಗಾರಿಕೆ, ಸಂಸ್ಥೆಗಳಲ್ಲಿ ಎರಡು ವರ್ಷಗಳ ಸೇವಾನುಭವ ಹೊಂದಿರುವ ರಾಜ್ಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏ.20 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.Read More

ಕನ್ನಡ

ಬಾಲ ಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

ಕ್ರೀಡಾ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ ಕ್ಷೇತ್ರಗಳಲ್ಲಿ ಹಾಗೂ ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರದಂತಹ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರಶಸ್ತಿ ಪುರಸ್ಕೃತ ಮಕ್ಕಳು ಸ್ವಯಂ ದೃಢೀಕೃತ ನಕಲು, ಸ್ವವಿವರ, ದಾಖಲೆಗಳೊಂದಿಗೆ ಹಾಗೂ 2021 ರ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಕಟಗೊಂಡ ಸ್ವ-ರಚಿತ ಮಕ್ಕಳ ಸಾಹಿತ್ಯದ ಕೃತಿಗಳ (ಮಕ್ಕಳೇ ರಚಿಸಿದ) 4 ಪ್ರತಿಯೊಂದಿಗೆ ಮಾರ್ಚ್ 31 ರ ಒಳಗೆ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸುವಾಗ ಅಕಾಡೆಮಿ ಬಾಲಗೌರವ ಪ್ರಶಸ್ತಿ ಅರ್ಜಿ ಎಂದು ಲಕೋಟೆ ಮೇಲೆ ನಮೂದಿಸಿರಬೇಕು.Read More

Dakshina Kannada

ಚೀಫ್ ವಾರ್ಡ್‍ನ್ ಹುದ್ದೆಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭವಾಗಿರುವ ಪೌರರಕ್ಷಣಾ ಪಡೆಯ ಮೇಲುಸ್ತುವಾರಿಗಾಗಿ ಚೀಫ್ ವಾರ್ಡನ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

Uttara Kannada

ಸಾವಯವ ಸಿರಿ: ಅರ್ಜಿ ಆಹ್ವಾನ

ಆಸಕ್ತ ಅರ್ಹ ನೊಂದಾಯಿತ ಸಾಮಾಜಿಕ ಸಂಸ್ಥೆಗಳು ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಸಾವಯವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರಬೇಕು. ಸಾವಯವ ಕೃಷಿ ಸಂಬಂಧಿತ ತರಬೇತಿ/ಕಾರ್ಯಾಗಾರಗಳನ್ನು ಆಯೋಜಿಸಲು ಅವಶ್ಯಕವಾದ ಮೂಲಭೂತ ಸೌಲಭ್ಯಗಳನ್ನು ಹೊಂದಿರಬೇಕು. ಕನಿಷ್ಠ 10 ಹೆ. ವ್ಯವಸಾಯ ಯೋಗ್ಯ ಪ್ರದೇಶವನ್ನು ಹೊಂದಿರಬೇಕು. Read More

Dakshina Kannada

ಎನಿಮಲ್ ವೆಲ್‍ಫೇರ್ ವಾರ್ಡನ್- ಅರ್ಜಿ ಆಹ್ವಾನ

ಜಿಲ್ಲಾ ಪ್ರಾಣಿದಯಾ ಸಂಘದ ಸಹಯೋಗದಲ್ಲಿ ಪ್ರಾಣಿ ಕ್ರೌರ್ಯ ತಡೆಗಟ್ಟುವ ದೈನಂದಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಂಭಾವನೆ ಅಪೇಕ್ಷಿಸದ ಎನಿಮಲ್ ವೆಲ್‍ಫೇರ್ ವಾರ್ಡನ್ ಆಗಿ ಕಾರ್ಯನಿರ್ವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.Read More

ಕನ್ನಡ

ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟ

ಕಾರವಾರ ಫೆ. 6, 2022: ಕರ್ನಾಟಕ ಸಾಹಿತ್ಯ ಅಕಡೆಮಿಯ ವತಿಯಿಂದ ಮಾರ್ಚ ತಿಂಗಳಿನಲ್ಲಿ 5 ದಿನಗಳ ವರೆಗೆ ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟ ಹಮ್ಮಿಕೊಳ್ಳಲಾಗಿದೆ. ಕಮ್ಮಟದ ಪರ್ಯಾಯ ಗೋಷ್ಟಿಯಲ್ಲಿ ರಾಷ್ಟ್ರೀಯ ಕನ್ನಡ ಸಂಶೋಧನಾ ಕುರಿತಾಗಿ ಪ್ರಬಂಧ ಮಂಡಿಸುವವರು ಫೆ.22ರೊಳಗಾಗಿ ಅರ್ಜಿಯೊಂದಿಗೆ ಪ್ರಬಂಧವನ್ನು ಅಕಾಡೆಮಿಗೆ, ರಿಜಿಸ್ಟರ್ ಅಂಚೆ ಅಥವಾ ಕೊರಿಯರ್ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ವೆಬ್‍ಸೈಟ್ http://sahityaacademy.karnataka.gov.in ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾರ್ ಕರಿಯಪ್ಪಾ. ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ದಕ್ಷಿಣ ಕನ್ನಡ: ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಸ್ತುತ ಜಿಲ್ಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 6 ರಿಂದ 10ನೇತರಗತಿಯ ವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.Read More

ಕನ್ನಡ

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.Read More

ಕನ್ನಡ

ಸಹಾಯಧನ : ಅವಧಿ ವಿಸ್ತರಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ಸಾಂಸ್ಕೃತಿಕ ಸಂಘ ಸಂಸ್ಥೆಗಳ ವಾರ್ಷಿಕ ಚಟುವಟಿಕೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿಸಲು, ಶಿಲ್ಪ ಹಾಗೂ ಚಿತ್ರಕಲೆ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read More

error: Content is protected !!