Tags :Applications

ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ಆರ್‍ಸೆಟಿಯಲ್ಲಿ ಕೃತಕ ಆಭರಣ ತಯಾರಿಕೆ ಕುರಿತು ಉಚಿತ ತರಬೇತಿ

ಉಡುಪಿ, ನ ೦3: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ 18 ನವೆಂಬರ್ 2020 ರಿಂದ 13 ದಿನಗಳ “ಕೃತಕ ಆಭರಣಗಳ ತಯಾರಿಕೆ”ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಊಟ – ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು; ಸಂಬಂಧಿಸಿದ ಕ್ಷೇತ್ರದ ಬಗ್ಗೆ ವಿಸ್ತಾರವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ […]Read More

ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಅವಧಿ ವಿಸ್ತರಣೆ

ಮಂಗಳೂರು ನ 03: ಪ್ರಸ್ತುತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನ ಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮೌಲನಾ ಅಝಾದ್ ಭವನ, ಓಲ್ಡ್‍ಕೆಂಟ್ ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಅರ್ಜಿ ಆಹ್ವಾನ

ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ನಿಗಮ – ಅರ್ಜಿ ಆಹ್ವಾನ

ಮಂಗಳೂರು ನ 03 : ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತುತ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ,  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್ […]Read More

ಅರ್ಜಿ ಆಹ್ವಾನ

ದೀಪಾವಳಿ ಹಬ್ಬ – ತಾತ್ಕಾಲಿಕ ಸುಡುಮದ್ದು ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಮಂಗಳೂರು ಅ 19: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವ ಅರ್ಜಿದಾರರು ಎಲ್‍ಇ-5 ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು  ಅಕ್ಟೋಬರ್ 27 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಆಯುಕ್ತರ ಕಚೇರಿ, ಎ.ಬಿ ಶೆಟ್ಟಿ ವೃತ್ತದ ಬಳಿ, ಮಂಗಳೂರು ನಗರ, ದೂ.ಸಂ: 0824-2220803 ನ್ನು ಸಂಪರ್ಕಿಸಲು ಪೆÇಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ ಉಳಿದೆಡೆ: ಮಂಗಳೂರು ಕಮಿಷನರೇಟ್ […]Read More

ಕನ್ನಡ

ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು ಅ 15: ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷವೂ ದ.ಕ. ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 1 ರಂದು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅತ್ಯುತ್ತಮ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ನೀಡಲಾಗುತ್ತದೆ.   ಪ್ರಸ್ತುತ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿಗಳನ್ನು ಅಕ್ಟೋಬರ್ 22 ರೊಳಗೆ ಆಹ್ವಾನಿಸಲಾಗಿದೆ.   ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಿಲಿತಕಲೆಗಳು, ಸಮಾಜಸೇವೆ, ಜಾನಪದ, ಪರಿಸರ – ವಿಜ್ಞಾನ, ವೈದ್ಯಕೀಯ, ಸಂಶೋಧನೆ ಪತ್ರಿಕೋಧ್ಯಮ […]Read More

ಅರ್ಜಿ ಆಹ್ವಾನ

ಡಿಪ್ಲೊಮಾ ಪ್ರವೇಶ – ಆಫ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

ಮಂಗಳೂರು ಅ 14: ಪ್ರಸಕ್ತ ಸಾಲಿನಲ್ಲಿ ಆಯಾ ಕಾಲೇಜುಗಳಲ್ಲಿ ಎರಡನೇ ಮುಂದುವರೆದ ಸುತ್ತಿನ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶ ಪಡೆದು ರದ್ದು ಪಡಿಸಿದ ನಂತರ ಲ್ಯಾಟರಲ್ ಎಂಟ್ರಿಯಲ್ಲಿ 2ನೇ ವರ್ಷದ ಡಿಪ್ಲೋಮಾ ಕೋರ್ಸಿಗಳಿಗೆ ಪ್ರವೇಶ ಪಡೆದಿರುವುದರಿಂದ ಉಳಿದ ಸೀಟುಗಳಿಗೆ  ಆಫ್-ಲೈನ್  ಮುಖಾಂತರ ಮೆರಿಟ್ ಆಧಾರದ ಮೇಲೆ ರೋಷ್ಟರ್‍ಗನುಗುಣವಾಗಿ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಿದೆ. ಆಯಾ ಪಾಲಿಟೆಕ್ನಿಕ್‍ನ ಹಂತದಲ್ಲಿ ಅಕ್ಟೋಬರ್ 15 ರೊಳಗೆ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ (ಸರ್ಕಾರಿ)   ಪಾಲಿಟೆಕ್ನಿಕ್ […]Read More

ಕನ್ನಡ

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ – ಅರ್ಜಿ ಆಹ್ವಾನ

ಮಂಗಳೂರು ಅ03 :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದ 10ನೇ ತರಗತಿಯವರೆಗಿನ  ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ www.scholarships.gov.in ನಲ್ಲಿ ಹಾಗೂ ಹೊಸ ಮತ್ತು ನವೀಕೃತ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.gokdom.kar.nic.in ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರೋಡ್, […]Read More

ಕನ್ನಡ

ಸಮಾಜ ಕಲ್ಯಾಣ ಇಲಾಖೆ – ಅರ್ಜಿ ಆಹ್ವಾನ

ಮಂಗಳೂರು ಅ 03 :- ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮೂಲನಿವಾಸಿ ಪಂಗಡದವರಾದ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹ ಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು. ಅರ್ಜಿಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, (ಗ್ರೇಡ್-1&2) ಸಮಾಜ ಕಲ್ಯಾಣ ಇಲಾಖೆಯಲ್ಲಿ ಪಡೆದು ನವೆಂಬರ್ 30 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:0824-2451269,2450114 ಸಂಪರ್ಕಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ […]Read More

ಅರ್ಜಿ ಆಹ್ವಾನ

ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆ-ಅರ್ಜಿ ಆಹ್ವಾನ

ಉಡುಪಿ ಅ 01: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಟಾನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲಾ ಮಟ್ಟದ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳಲ್ಲಿ ಲಭ್ಯವಿರುತ್ತವೆ. ಅರ್ಜಿಗಳನ್ನು ಪಡೆಯಲು ಅಕ್ಟೋಬರ್ ೧೬ ಕೊನೆಯ ದಿನ.ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು, ಉಡುಪಿ ಇವರ ಕಚೇರಿಗೆ ಅಕ್ಟೋಬರ್ ೨೩ ಒಳಗೆ ಸಲ್ಲಿಸಬೇಕು. ಇದನ್ನೂ ಓದಿ: ಉಡುಪಿ […]Read More

ಅರ್ಜಿ ಆಹ್ವಾನ

ಪ.ಜಾತಿ ಮತ್ತು ಪ.ಪಂಗಡದ ಉಪಯೋಜನೆಯಡಿ ತರಬೇತಿ ಶಿಬಿರ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

2019-20ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಯುವಕ/ಯುವತಿಯರಿಗೆ ಜೀವರಕ್ಷಕ (ಲೈಫ್ ಗಾರ್ಡ್), ಜಿಮ್/Read More

error: Content is protected !!