Tags :Dharmasthala

ಕನ್ನಡ

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅರೋಗ್ಯ ಸಚಿವ ಡಾ. ಸುಧಾಕರ್

ಬೆಳ್ತಂಗಡಿ, ಡಿಸೆಂಬರ್ 10, 2020: ಆರೋಗ್ಯ ಸಚಿವ ಡಾ. ಸುಧಾಕರ್ ಸಕುಟುಂಬಿಕರಾಗಿ ಗುರುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು. ಕೊರೊನಾ ಹತೋಟಿಯಲ್ಲಿದೆ: ಕೊರೊನಾ ಈಗ ಹತೋಟಿಯಲ್ಲಿದ್ದು ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಒಂದು ವರ್ಷದೊಳಗೆ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಸಹಕರಿಸಬೇಕು ಎಂದು ಸಲಹೆ ನೀಡಿದರು. […]Read More

ಕನ್ನಡ

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 73 ನೆ ಜನ್ಮದಿನ ಆಚರಣೆ

ಬೆಳ್ತಂಗಡಿ, ನ 25: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 73 ನೆ ಜನ್ಮದಿನವನ್ನು ಧರ್ಮಸ್ಥಳದಲ್ಲಿ ಇಂದು ಸರಳವಾಗಿ ಆಚರಿಸಲಾಯಿತು. ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಡಿ. ಸಂಪತ್ ಸಾಮ್ರಾಜ್ಯ, ಬಿ. ಅಪ್ಪಣ್ಣ ಹೆಗ್ಡೆ ಮೊದಲಾದವರು ಹೆಗ್ಗಡೆಯವರಿಗೆ ಗೌರವಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ಅರ್ಪಿಸಿದರು. ಸಾವಿರಾರು ಮಂದಿ ಅಭಿಮಾನಿಗಳು, ಭಕ್ತರು ದೂರವಾಣಿ, ವಾಟ್ಸಾಪ್, ವಿದ್ಯುದಂಚೆ […]Read More

ಕನ್ನಡ

ಧರ್ಮಸ್ಥಳದಲ್ಲಿ “ವಾತ್ಸಲ್ಯ” ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ, ನ 25: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ವಾತ್ಸಲ್ಯ” ಕಾರ್ಯಕ್ರಮಕ್ಕೆ ಹೇಮಾವತಿ ವಿ. ಹೆಗ್ಗಡೆಯವರು ಚಾಲನೆ ನೀಡಿದರು. “ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖವನ್ನು ನಿವಾರಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವುದೇ ವಾತ್ಸಲ್ಯ ಕಾರ್ಯಕ್ರಮದ ಉದ್ದೇಶವಾಗಿದೆ,” ಹೇಮಾವತಿ ವಿ. ಹೆಗ್ಗಡೆಯವರು ಹೇಳಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕಿಗೆ ಮಾರ್ಗದರ್ಶನ […]Read More

ಕನ್ನಡ

ಧರ್ಮಸ್ಥಳದ ಶಾಂತಿವನದಲ್ಲಿ ಅನುವರ್ತನಾ ಚಿಕಿತ್ಸಾ ಘಟಕ ಉದ್ಘಾಟನೆ

ಬೆಳ್ತಂಗಡಿ, ನ 23: ಧರ್ಮಸ್ಥಳದ ಶಾಂತಿವನ ದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಅನುವರ್ತನಾ ಚಿಕಿತ್ಸಾ ಘಟಕವನ್ನು ಡಿ. ಹರ್ಷೇಂದ್ರಕುಮಾರ್ ಸೋಮವಾರ ಉದ್ಘಾಟಿಸಿದರು. ಲೋಕಾಯುಕ್ತ ವಿಭಾಗದ ಜಿಲ್ಲಾ ನ್ಯಾಯಾಧೀಶ ಎಚ್.ಎ. ಮೋಹನ್, ಡಾ.ಶಿವಪ್ರಸಾದ್ ಶೆಟ್ಟಿ, ಡಾ. ಶಶಿಕಿರಣ್ ಡಾ. ಶಶಿಕಾಂತ್ ಜೈನ್ ಉಪಸ್ಥಿತರಿದ್ದರು. ಪಾದಗಳಿಗೆ ಮಸಾಜ್ ಮಾಡಿ ದೇಹದ ಅಂಗಗಳಿಗೆ ಹಾಗೂ ಮನಸ್ಸಿಗೆ ಮುದನೀಡುವ ಚಿಕಿತ್ಸಾ ಕ್ರಮವೇ ಅನುವರ್ತನಾ ಚಿಕಿತ್ಸೆ. Also read:Read More

Dakshina Kannada

ರುಡ್‍ಸೆಟ್ ಸಂಸ್ಥೆ: ಆಡಳಿತ ವಿಭಾಗದ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ ನ 12: ಧರ್ಮಸ್ಥಳ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಕೇಂದ್ರಗಳ ಆಡಳಿತ ವಿಭಾಗದ ನೂತನ ಕಟ್ಟಡದ ಉದ್ಘಾಟನೆ ಇಂದು ನಡೆಯಿತು. “ಪ್ರತಿಯೊಬ್ಬ ವ್ಯಕ್ತಿಯಲ್ಲಿ ಪ್ರತಿಭೆ, ಬುದ್ಧಿವಂತಿಕೆ ಹಾಗೂ ಸಾಮಥ್ರ್ಯ ಇರುತ್ತದೆ. ಅವರಿಗೆ ಸಕಾಲದಲ್ಲಿ ಮಾಹಿತಿ ಹಾಗೂ ತರಬೇತಿ ನೀಡಿ ಸ್ವ-ಉದ್ಯೋಗ ಮಾಡಲು ಪ್ರೇರಣೆ ನೀಡುವುದೇ ರುಡ್‍ಸೆಟ್ ಸಂಸ್ಥೆಯ ಉದ್ದೇಶವಾಗಿದೆ. 1982 ರಲ್ಲಿ ಉಜಿರೆಯಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿದ ರುಡ್‍ಸೆಟ್ ಸಂಸ್ಥೆ ಇಂದು ದೇಶದೆಲ್ಲೆಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ,” ಎಂದು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. […]Read More

ಕನ್ನಡ

ರಾಜ್ಯೋತ್ಸವ ಪ್ರಶಸ್ತಿ ಪುರಸೃತ ಎಂ.ಕೆ. ವಿಜಯ ಕುಮಾರ್ ಅವರಿಗೆ ಧರ್ಮಸ್ಥಳದ ವತಿಯಿಂದ ಅಭಿನಂದನೆ

ಬೆಳ್ತಂಗಡಿ, ನ 12 : ರಾಜ್ಯೋತ್ಸವ ಪ್ರಶಸ್ತಿ ಪುರಸೃತ, ಕಾರ್ಕಳದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಶುಭಶ್ಚಂದ್ರರಾಜ್, ಪುರಂದರ ಭಟ್ ಗೌರವಿಸಿ ಅಭಿನಂದಿಸಿದರು. ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯ, ಮೋಹನ್ ಪಡಿವಾಳ್, ನೇಮಿರಾಜ ಆರಿಗ, ಮಹಾವೀರ ಹೆಗ್ಡೆ, ಎಂಕೆ. ವಿಪುಲ್ ತೇಜ್, ಪಾಶ್ರ್ವನಾಥ ವರ್ಮಾ ಮೊದಲಾದವರು ಉಪಸ್ಥಿತರಿದ್ದರು.Read More

ಕನ್ನಡ

ಗ್ರಾಮೀಣ ವಿದ್ಯಾರ್ಥಿಗಳಿಗೆ ಅಂತರ್ಜಾಲ ಶಿಕ್ಷಣ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನತಾಣ ಕಾರ್ಯಕ್ರಮ ಉದ್ಘಾಟನೆ

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜ್ಞಾನತಾಣ ಕಾರ್ಯಕ್ರಮ ಉದ್ಘಾಟಿಸಿದರು.Read More

ಕನ್ನಡ

ಧರ್ಮಸ್ಥಳ ಹಿಂದೂ ರುದ್ರಭೂಮಿಗೆ ವೀರೇಂದ್ರ ಹೆಗ್ಗಡೆಯವರಿಂದ 2.50 ಲಕ್ಷ ಅನುದಾನ ಮಂಜೂರು

ಬೆಳ್ತಂಗಡಿ, ನ 05: ಧರ್ಮಸ್ಥಳದ ಹಿಂದೂ ರುದ್ರಭೂಮಿಯ ಸಮಿತಿ ಸದಸ್ಯರ ಆಶಯದಂತೆ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸುಮಾರು 6.00ಲಕ್ಷ ವೆಚ್ಚದಲ್ಲಿ ನವೀಕರಣ ಕಾರ್ಯವು ನಡೆಯುತ್ತಿದೆ. ಈ ನವೀಕರಣ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪೂರಕ ಅನುದಾನವಾಗಿ ರೂ.2,50,000 ಮಂಜೂರಾತಿ ನೀಡಿದ್ದಾರೆ. ಧರ್ಮಸ್ಥಳ ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಡಿ. ಹರ್ಷೇಂದ್ರ ಕುಮಾರ್‍ರವರ ಸಲಹೆ ಸೂಚನೆಯಂತೆ ನವೀಕರಣದ ಅಂಗವಾಗಿ ನೂತನ ಸಿಲಿಕಾನ್ ಬಾಕ್ಸ್ ಅಳವಡಿಕೆ, ಶವಕಟ್ಟೆ, ವಿಶ್ರಾಂತಿ ಕೊಠಡಿ, […]Read More

error: Content is protected !!