Tags :Udupi Sri Krishna Matha

ಕನ್ನಡ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೊಂಡೆವೂರು ಶ್ರೀ ಭೇಟಿ

ಉಡುಪಿ, ಅ 01: ಕೊಂಡೆವೂರಿನ ಶ್ರಿಯೋಗಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು. ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆಗಾಗಿ ತುಳಸಿಯನ್ನು ನೀಡಿ ದೇವರ ದರ್ಶನ ಪಡೆದುಕೊಂಡರು. ನಂತರ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಕೊಂಡೆವೂರಿನ ಶ್ರಿಯೋಗಾನಂದ ಸರಸ್ವತಿ ಸ್ವಾಮೀಜಿಯವರನ್ನು ಶ್ರೀಕೃಷ್ಣ ದೇವರ ಪ್ರಸಾದ ನೀಡಿ ಗೌರವಿಸಿದರು.Read More

Religion

ಶ್ರೀಕೃಷ್ಣಮಠಕ್ಕೆ ರಘುಪತಿ ಭಟ್, ನಗರಸಭೆ ನೂತನ ಅಧ್ಯಕ್ಷೆ, ಉಪಾಧ್ಯಕ್ಷೆ ಭೇಟಿ

ಉಡುಪಿ ಅ 30: ಶ್ರೀಕೃಷ್ಣಮಠಕ್ಕೆ,ಉಡುಪಿಯ ಶಾಸಕರಾದ ರಘುಪತಿ ಭಟ್ ಹಾಗೂ ಉಡುಪಿ ನಗರಸಭೆಗೆ ನೂತನವಾಗಿ ಚುನಾಯಿತರಾದ ಅಧ್ಯಕ್ಷೆ ಸುಮಿತ್ರಾ ನಾಯಕ್,ಉಪಾಧ್ಯಕ್ಷೆ ಲಕ್ಷ್ಮೀ ಮಂಜುಕೊಳ ಹಾಗೂ ಇತರ ಪದಾಧಿಕಾರಿಗಳು ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.  Read More

News

ಶ್ರೀಕೃಷ್ಣಮಠದಲ್ಲಿ ಋಕ್ಸಂಹಿತಾ ಯಾಗ

ಉಡುಪಿ, ಅ 29: ಶ್ರೀಕೃಷ್ಣಮಠದಲ್ಲಿ ಆಶ್ವಯುಜ ಶುಕ್ಲ ತ್ರಯೋದಶಿಯಿಂದ ಕೃಷ್ಣ ಪಂಚಮಿಯವರೆಗೆ ಬಡಗುಮಾಳಿಗೆಯಲ್ಲಿ ನಿರ್ಮಿಸಿದ  ಮಂಟಪದಲ್ಲಿ ನಡೆಯುತ್ತಿರುವ ಋಕ್ಸಂಹಿತಾ ಯಾಗ ನಡೆಯುತ್ತಿದೆ. ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಮಠದ ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಅವಧಾನಿ ವಿದ್ವಾನ್ ಗುಂಡಿಬೈಲ್ ಸುಬ್ರಹ್ಮಣ್ಯ ಭಟ್ ಇವರ ನೇತೃತ್ವದಲ್ಲಿ ಮಹಾಪೂಜೆ ನಡೆಯಿತು.Read More

ಕನ್ನಡ

ಶ್ರೀಕೃಷ್ಣ ಮಠದಲ್ಲಿ ಕದಿರು ಕಟ್ಟುವ ಹಬ್ಬ

ಉಡುಪಿ ಅ 26: ಸಂಪ್ರದಾಯದಂತೆ ವಿಜಯದಶಮಿ ದಿನವಾದ ಇಂದು ಶ್ರೀಕೃಷ್ಣ ಮಠದಲ್ಲಿ ಕದಿರು ಕಟ್ಟುವ ಹಬ್ಬ ನಡೆಯಿತು. ಶ್ರೀಸೋದೆ ಮಠದಲ್ಲಿ ಕದಿರನ್ನು ಪೂಜಿಸಿ ಮೆರವಣಿಗೆಯಲ್ಲಿ ಶ್ರೀಕೃಷ್ಣನ ಗರ್ಭಗುಡಿಯ ಪೂರ್ವದ್ವಾರದಲ್ಲಿ ಒಳತಂದು ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಪರ್ಯಾಯ ಮಠದ ಪಾರುಪತ್ಯಗಾರರಾದ ಲಕ್ಷ್ಮೀಶ ಆಚಾರ್ಯರ ನೇತೃತ್ವದಲ್ಲಿ ಪೂಜೆ ನೆರವೇರಿತು. ಬಡಗುಮಾಳಿಗೆಯಲ್ಲಿ ಪೂಜೆಯ ನಂತರ ಅಲ್ಲಿ ನೆರೆದಿದ್ದ ಭಕ್ತರಿಗೆ ಕದಿರನ್ನು ವಿತರಿಸಲಾಯಿತು.Read More

error: Content is protected !!