Tags :Udupi

ಕನ್ನಡ

ಉಡುಪಿ ಮಕ್ಕಳ ರಕ್ಷಣಾ ಘಟಕ ನೇತೃತ್ವದಲ್ಲಿ ಉತ್ತರ ಕರ್ನಾಟಕದ 17 ಮಕ್ಕಳ ರಕ್ಷಣೆ

ಉಡುಪಿ, ಅ 29: ಇಂದು ಬೆಳ್ಳಂಬೆಳಗ್ಗೆ ಮಕ್ಕಳ ರಕ್ಷಣಾ ಘಟಕ ಹಾಗೂ ಇತರ ಇಲಾಖಾ ಅಧಿಕಾರಿಗಳು ಮಲ್ಪೆ ಬಂದರಿನಲ್ಲಿ 17 ಮಕ್ಕಳನ್ನು ರಕ್ಷಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ,.ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ .ಪೊಲೀಸ್ ಇಲಾಖೆ .ಮಕ್ಕಳ ಸಹಾಯವಾಣಿ ಅಧಿಕಾರಿಗಳು ಹಾಗೂ, ನಾಗರಿಕ ಸೇವಾ ಟ್ರಸ್ಟ್ -ಉಡುಪಿ ಕಾರ್ಯಕರ್ತರು ಗುರುವಾರ ಸುಮಾರು ಐದು ಘಂಟೆ ಸಮಯಕ್ಕೆ ಉಡುಪಿಯ ಮಲ್ಪೆ ಬಂದರಿಗೆ ತೆರಳಿ ಅಲ್ಲಿ ಮೀನು ಆಯುವ 17 ಮಕ್ಕಳನ್ನು ರಕ್ಷಿಸಿದರು. […]Read More

Udupi

ಉಡುಪಿ ಜಿಲ್ಲೆ ಗ್ರಾಮೀಣ ಪ್ರದೇಶದಲ್ಲಿ ಕಡ್ಡಾಯ ಪ್ಲಾಸ್ಟಿಕ್ ನಿಷೇಧ ಜಾರಿ: ದಿನಕರ ಬಾಬು

ಉಡುಪಿ, ಅ 19: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ನವೆಂಬರ್ 1 ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವ ಕುರಿತಂತೆ ಎಲ್ಲಾ ಪಿಡಿಓಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್ ನಿಷೇಧ ಕಾಯಿದೆ 2016 ರಲ್ಲಿ ಜಾರಿಯಾಗಿದ್ದರೂ ಸಹ ಗ್ರಾಮೀಣ ಪ್ರದೇಶದಲ್ಲಿ ಈ ಬಗ್ಗೆ ಆದೇಶ ಪಾಲನೆ […]Read More

Top Story

ಉಡುಪಿ ರೇಡಿಯೋ ಟವರ್ ಗೆ ಚಾಲನೆ, ಮತ್ತೆ ಮೊಳಗಲಿದೆ ‘ಬಿಗಿಲ್’

ಉಡುಪಿ , ಅ 02: ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿದ ಸ್ವಾತಂತ್ರ್ಯ ಪೂರ್ವದ ರೇಡಿಯೋ ಟವರ್ ಗೆ ಮರುಜೀವ ಬಂದಿದೆ. 1938 ರಲ್ಲಿ ನಿರ್ಮಾಣಗೊಂಡಿರುವ ಈ ಟವರ್ ಕೆಲವು ವರ್ಷಗಳಿಂದ ಕಾರ್ಯನಿರ್ವಹಣೆ ಸ್ಥಗಿತಗೊಳಿಸಿದ್ದು, ಕಳೆದ ಬಾರಿಯ ಗಾಂಧೀ ಜಯಂತಿ ಕಾರ್ಯಕ್ರಮದಂದು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಇದನ್ನು ದುರಸ್ತಿಗೊಳಿಸಿ, ಸಾರ್ವಜನಿಕ ಬಳಕೆಗೆ ಅನುವು ಮಾಡಲು ಸೂಚಿಸಿದ್ದರು. ಇಂದು ಗಾಂಧೀ ಜಯಂತಿಯಂದು ಇದರ ಪ್ರಸಾರ ಕಾರ್ಯಕ್ಕೆ ಶಾಸಕ ರಘುಪತಿಭಟ್ ಚಾಲನೆ ನೀಡಿದರು. ಪ್ರಸ್ತುತ ದುರಸ್ತಿಗೊಂಡಿರುವ ಈ ಟವರ್ ಮೂಲಕ […]Read More

ಕನ್ನಡ

ಕರಾವಳಿ ಕಾವಲು ಪೊಲೀಸ್ ವತಿಯಿಂದ ಬೀಚ್ ಸ್ಚಚ್ಛತೆ

ಉಡುಪಿ ಅ 02: ಗಾಂಧೀ ಜಯಂತಿ ಪ್ರಯುಕ್ತ, ಕರಾವಳಿ ಕಾವಲು ಪೊಲೀಸ್ , ಮಲ್ಪೆ ಅವರವತಿಯಿಂದ , ಕಡಲ್ ಸೆಂಟರ್ ಫಾರ್ ಸಪ್ ಸರ್ಫ್ ಯೋಗ ಮತ್ತು ನೇಶನ್ ನೆಸ್ಟ್ ತಂಡದ ಸಹಯೋಗದಲ್ಲಿ , ಮಲ್ಪೆ ಲೈಟ್ಹೌಸ್ ದ್ವೀಪದಲ್ಲಿ ಮತ್ತು ಸಮುದ್ರ ತೀರ ಪ್ರದೇಶದಲ್ಲಿ ಸ್ಚಚ್ಛತಾ ಕಾರ್ಯಕ್ರಮವು, ಕರಾವಳಿ ಕಾವಲು ಪಡೆಯ ಎಸ್ಪಿ ಆರ್.ಚೇತನ್ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ಸಂಗ್ರಹಿಸಿದ ಕಸವನ್ನು ಮಣಿಪಾಲದ ಕಸ ವಿಲೇವಾರಿ ಘಟಕಕ್ಕೆ ಸಾಗಿಸಲಾಯಿತು.Read More

ಕನ್ನಡ

ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಕಡ್ಡಾಯ – ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ ಸೆ 22 : ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದರು. ಅವರು ಇಂದು ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರ್ಷಕ್ಕೊಮ್ಮೆ ಕಡ್ಡಾಯವಾಗಿ ಹೆಲ್ತ್ ಚೆಕ್‍ಆಪ್ ಕಾರ್ಯವು ಉನ್ನತ ಆಸ್ಪತ್ರೆಯ ಸಹಯೋಗದೊಂದಿಗೆ ಚಿಕಿತ್ಸೆ ನೀಡಬೇಕು. ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಜನಪರ ಕಲ್ಯಾಣ […]Read More

error: Content is protected !!